ಮೂಡಲಗಿ: ರಾಜ್ಯ, ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದವತಿಯಿಂದ ನೀಡುವ ಮೇರಿ ದೇವಾಸಿಯಾ ಪ್ರಶಸ್ತಿಗೆ ಮೂಡಲಗಿ ವಲಯದ ಮೇಳವಂಕಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾ ನಾಗಪ್ಪ ದುರಗಣ್ಣವರ (ಸಣ್ಣಕ್ಕಿ) ಆಯ್ಕೆಯಾಗಿದ್ದಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಮಾ. 21 ರಂದು ರವಿವಾರ ಸವದತ್ತಿಯ ಮಾಮನಿ ಕಲ್ಯಾಣ ಮಂಟಪದಲ್ಲಿ ಮುಂಜಾನೆ 10-00 ಗಂಟೆಗೆ ಜರುಗಲಿದೆ ಎಂದು ಸರಕಾರಿ ನೌಕರ ಸಂಘದ ರಾಜ್ಯ ಪ್ರಧಾನ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾಧ್ಯಕ್ಷ ಜಗದೀಶಗೌಡ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
