ಶುಕ್ರವಾರ , ನವೆಂಬರ್ 15 2024
kn
Breaking News

ಬೆಳಗಾವಿಯಲ್ಲಿ ತಾಯಿ & ಮಕ್ಕಳ ಆಸ್ಪತ್ರೆ ಸ್ಥಾಪಿಸುವಂತೆ ಸಂಸದ ಕಡಾಡಿ ಒತ್ತಾಯ

Spread the love

ಮೂಡಲಗಿ: ಬೆಳಗಾವಿ ವೃತ್ತದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಒತ್ತಾಯಿಸಿದರು.
ಮಂಗಳವಾರ (ಮಾ 23) ರಂದು ಸಂಸತ್ತಿನ ರಾಜ್ಯಸಭೆಯಲ್ಲಿ ಸಂಸದರಾದ ಈರಣ್ಣ ಕಡಾಡಿ ಅವರು ಕೇಳಿದ ಪ್ರಶ್ನೆಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ ಉತ್ತರಿಸಿದ ಅವರು ಬೆಳಗಾವಿ ವೃತ್ತದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಸ್ಥಾಪಿಸುವ ಕುರಿತು ಈಗಾಗಲೇ ಕಡಾಡಿ ಅವರು ಪತ್ರ ಬರೆದ್ದಿದ್ದಾರೆ. ರಾಜ್ಯ ಸರ್ಕಾರದಿಂದ ಪ್ರಸ್ತಾವಣೆ ಸಲ್ಲಿಸಿ ಆಧಾರದ ಮೇಲೆ ಅನುಮೋದನೆ ನೀಡಲಾಗುವುದು ಎಂದು ಸಚಿವರು ಉತ್ತರಿಸಿದರು.
ದೇಶದಲ್ಲಿ ರಕ್ತಹೀನತೆಯಿಂದ ಬಳಲುತ್ತಿರುವರಲ್ಲಿ ಶೇ 50% ಗರ್ಭಿಣಿ ಮಹಿಳೆಯರು ಇದ್ದಾರೆ. ಭಾರತವನ್ನು ಅನೀಮಿಯಾದಿಂದ ಮುಕ್ತಗೊಳಿಸಲು ಕೇಂದ್ರ ಸರ್ಕಾರ ರಾಷ್ಟ್ರೀಯ ಆರೋಗ್ಯ ಮಿಷನ್ ಮೂಲಕ ಪ್ರತಿ ರಾಜ್ಯಗಳ ಸಹಯೋಗದಲ್ಲಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ ಎಂದರು. ಕರ್ನಾಟಕ ರಾಜ್ಯ ಕಳೆದ ಮೂರು ವರ್ಷಗಳಗಳಲ್ಲಿ ಪ್ರತಿಶತ 100 ರಷ್ಟು ಅನುಧಾನವನ್ನು ಬಳಸಿಕೊಂಡಿದೆ ಎಂದು ಉತ್ತರಿಸಿದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page