ಸೋಮವಾರ , ಜೂನ್ 5 2023
kn
Breaking News

ಏ.8ರಂದು ಶರಣು ಶರಣಾರ್ಥಿ ಕಾರ್ಯಕ್ರಮ

Spread the love

ಮೂಡಲಗಿ: ಅಖಿಲ ಭಾರತ ದೀಕ್ಷ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಏ. 8ರಂದು ಮುಂಜಾನೆ 9ಗಂಟೆಗೆ ಸಮೀಪದ ಗುರ್ಲಾಪೂರದ ಬಸವೇಶ್ವರ ಮಂಪಟದಲ್ಲಿ ಶರಣು ಶರಣಾರ್ಥಿ ಕಾರ್ಯಕ್ರಮ ನಡೆಯಲಿದೆ ಎಂದು ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದರು.

ಸುದ್ದಿಗೋಪ್ಠಿಯಲ್ಲಿ ಮಾತನಾಡಿದ ಅವರು, ದೀಕ್ಷ ಪಂಚಮಸಾಲಿ ಸಮಾಜದವನ್ನು 2ಎ ಮೀಸಲಾತಿ ಕಲ್ಪಿಸಬೇಕು ಮತ್ತು ಉಳಿದ 84 ಉಪಜಾತಿಗಳನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಬೇಕೆಂದು ಹೋರಾಟದ ಭಾಗವಾಗಿ ಮತ್ತು ಇದುವರೆಗೆ ಹೋರಾಟಕ್ಕೆ ಸಹಕಾರ ನೀಡದ ಹಿನ್ನೆಲೆಯಲ್ಲಿ ರಾಜ್ಯದ ಜನರಿಗೆ ಅಭಿನಂದನೆ ಸಲ್ಲಿಸಲು ಬಸವಜಯ ಮೃತ್ಯುಂಜಯ ಸ್ವಾಮೀಜಗಳು ಕಾರ್ಯಕ್ರಮ ಆಯೋಜಿಸಿದ್ದಾರೆ ಎಂದರು.

ಯುವ ಮುಖಂಡ ಮಲ್ಲು ಬೋಳನವರ ಮಾತನಾಡಿ, ಏ.8ರಂದು ಬೆಳ್ಳಗೆ 9 ಗಂಟೆಗೆ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿಗಳು ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಮತ್ತು ಸಮಾಜದ ಅನೇಕ ಮುಖಂಡರು ಆಗಮಿಸುವವರು. ಆದರಿಂದ ತಾಲೂಕಿನ ಪಂಚಮಸಾಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಕೋವಿಡ್-19 ಪಾಲನೆಯೊಂದಿಗೆ ಭಾಗವಹಿಬೇಕೆಂದರು.

ಯುವ ಮುಖಂಡ ಈಶ್ವರ ಢವಳೇಶವರ ಮಾತನಾಡಿ, ಸಮಾಜದ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ಮೀಸಲಾತಿ ನೀಡಲು ನವೆಂಬರ್ ತಿಂಗಳವರೆಗೆ ಸಮಯ ತೆಗೆದುಕೊಂಡಿದೆ. ಹೀಗಾಗಿ ಸದ್ಯಕ್ಕೆ ಹೋರಾಟ ಕೈಬಿಡಲಾಗಿದೆ. ನವೆಂಬರ್ ನಂತರ ಸರ್ಕಾರದ ತೀರ್ಮಾನ ನೋಡಿಕೊಂದು ಸಮಾಜ ಮುಂದೆ ನಿರ್ಧಾರವಾಗಲಿದೆ ಎಂದು ಹೇಳಿದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page