ಮುಗಳಖೋಡ: ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೊಡೆದೊಡಿಸುವಲ್ಲಿ ಒಗ್ಗಟ್ಟುನ್ನು ಪ್ರದರ್ಶಿಸುವಂತೆ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಹಾಗೂ ರೇಡ್ ಕ್ರಾಸ್ ಘಟಕದ ವತಿಯಿಂದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ರವಿವಾರ ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕೊರೊನಾ ಕತ್ತಲಿನಿಂದ ಬೆಳಕಿನೆಡೆಗೆ ಹೆಜ್ಜೆ ಇಡುವಂತೆ ಪ್ರಧಾನಿಗಳು ಸಂಕಲ್ಪ ಮಾಡಿದ್ದಾರೆ. ಅವರು ಆಶಯದಂತೆ ನಾವೆಲ್ಲರೂ ಮನೆ-ಕ್ವಾರಂಟನೆಗಳಲ್ಲಿ ಏಕಾಂತನದ ಅನುಭವಿಸುತ್ತಿರುವ ಮನಗಳಿಗೆ ಭರವಸೆಯ ಆಶಾಕಿರಣ ಮೂಡಿಸಿ ಕೊರೊನಾ ಓಡಿಸಲು ಎಲ್ಲರೂ ದೃಢ ಸಂಕಲ್ಪ ಮಾಡಬೇಕಾದ ಅನಿವಾರ್ಯತೆ ಇದೆ.
ರವಿವಾರ ರಾತ್ರಿ 9 ಗಂಟೆಗೆ ಮೊಂಬತ್ತಿಯಾಗಲಿ, ದೀಪವಾಗಲಿ ಅಥವಾ ಟಾರ್ಚ್‍ವಾಗಲಿ ಒಂಬತ್ತು ನಿಮಿಷಗಳ ಕಾಲ ಬೆಳಗಬೇಕು. ಮನೆಯೊಳಗೆ ಇದ್ದುಕೊಂಡು ಸಾಮಾಜಿಕ ಅಂತರ ಪಾಲಿಸಬೇಕು. ಯಾವುದೇ ಕಾರಣಕ್ಕೂ ಗುಂಪುಗೂಡಬಾರದು ಎಂದು ಅವರು ವಿನಂತಿಸಿಕೊಂಡಿದ್ದಾರೆ.
ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸಿ..:- ಎಪ್ರೀಲ್-14ರ ತನಕ ದೇಶದಾದ್ಯಂತ ಲಾಕ್‍ಡೌನ್ ಜಾರಿಯಲ್ಲಿದ್ದು, ಯಾರು ಮನೆಯಿಂದ ಆಚೆ ಬರದೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಆದೇಶ ಪಾಲಿಸಬೇಕಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಮಹಾಮಾರಿ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸಿ ರೋಗ ಮುಕ್ತ ಬಲಿಷ್ಠ ಭಾರತ ನಿಮ್ರಿಸೋಣ ಎಂದು ಎನ್.ಎಸ್.ಎಸ್ ಹಾಗೂ ರೆಡ್ ಕ್ರಾಸ್ ಘಟಕದ ವತಿಯಿಂದ ಜನತೆಯಲ್ಲಿ ಮನವಿ ಮಾಡಿಕೊಳ್ಳಲಾಗಿದೆ.
