ಸೋಮವಾರ , ಜೂನ್ 5 2023
kn
Breaking News

ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಕೆಎಂಎಫ್ ಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ

Spread the love

ನವದೆಹಲಿ : ಶಾಲೆ ಹಾಗೂ ಅಂಗನವಾಡಿ ಮಕ್ಕಳಲ್ಲಿ ಅಪೌಷ್ಠಿಕತೆಯನ್ನು ನಿವಾರಣೆಗೊಳಿಸಿ ಆರೋಗ್ಯವಂತರನ್ನಾಗಿಸುವ ಸಾಮಾಜಿಕ ಕಳಕಳಿಯೊಂದಿಗೆ ರಾಜ್ಯ ಸರ್ಕಾರವು ಕೆಎಂಎಫ್ ಸಹಯೋಗದೊಂದಿಗೆ ಆರಂಭಿಸಲಾದ ಕ್ಷೀರಭಾಗ್ಯ ಯೋಜನೆಗೆ ಅಂತರಾಷ್ಟಿಯ ಡೇರಿ ಫೆಡರೇಷನ್ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಿದೆ.
ಉತ್ತರ ಪ್ರದೇಶದ ಗ್ರೇಟರ್ ನೋಯಿಡಾದಲ್ಲಿ ನಿನ್ನೆಯಿಂದ ಆರಂಭಗೊoಡಿರುವ ಅಂತರರಾಷ್ಟಿಯ ಡೇರಿ ಫೆಡರೇಷನ್ ವಿಶ್ವ ಡೇರಿ ಶೃಂಗ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪರವಾಗಿ ವ್ಯವಸ್ಥಾಪಕ ನಿರ್ದೇಶಕ ಬಿ.ಸಿ. ಸತೀಶ, ಮಾರುಕಟ್ಟೆ ವಿಭಾಗದ ನಿರ್ದೇಶಕ ರಘುನಂದನ್, ಮಾರುಕಟ್ಟೆ ವಿಭಾಗದ ಅಪರ್ ನಿರ್ದೇಶಕ ಸತೀಶ ಅವರು ಅಂತರರಾಷ್ಟಿಯ ಡೇರಿ ಫೆಡರೇಷನ್ ಡೈರೆಕ್ಟರ್ ಜನರಲ್ ಕ್ಯಾರೋಲಿನ್ ಇಮೊಂಡ್ ಅವರಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ರಾಜ್ಯದಲ್ಲಿ ಕ್ಷೀರ ಭಾಗ್ಯ ಯೋಜನೆಯು ಈಗಾಗಲೇ ೯ ವರ್ಷ ಪೂರೈಸಿದ್ದು, ೧೦ನೇ ವರ್ಷಕ್ಕೆ ದಾಪುಗಾಲು ಹಾಕುತ್ತಿದೆ. ಈ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಒಟ್ಟಾರೆ ೫೫,೬೮೩ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿನ ೧ ರಿಂದ ೧೦ನೇ ತರಗತಿಯ ಅಂದಾಜು ೬೪ ಲಕ್ಷ ವಿದ್ಯಾರ್ಥಿಗಳು ಹಾಗೂ ೬೪ ಸಾವಿರ ಅಂಗನವಾಡಿಗಳಲ್ಲಿ ೬ ತಿಂಗಳಿನಿoದ ೬ ವರ್ಷದವರೆಗಿನ ೩೯.೫೦ ಲಕ್ಷ ಮಕ್ಕಳು ಸೇರಿದಂತೆ ರಾಜ್ಯದ ಒಂದು ಕೋಟಿ ಮಕ್ಕಳಿಗೆ ೧೫೦ ಮಿ.ಲೀ ಹಾಲನ್ನು ವಾರದಲ್ಲಿ ೫ ದಿನಗಳವರೆಗೆ ನೀಡಲಾಗುತ್ತಿದೆ.
ಅಂತರಾಷ್ಟಿಯ ಡೇರಿ ಫೆಡರೇಷನ್ ಸಂಸ್ಥೆಯು ಡೇರಿ ಉದ್ಯಮದ ವಿವಿಧ ವಿಭಾಗಗಳಲ್ಲಿ ಹೊಸ ಅವಿಷ್ಕಾರ ಹಾಗೂ ಸಾಧನೆಗಳನ್ನು ಮಾಡುತ್ತಿರುವ ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸುತ್ತ ಬಂದಿದ್ದು, ಈ ವರ್ಷ ಈ ಪ್ರಶಸ್ತಿ ಪುರಸ್ಕಾರಕ್ಕೆ ೧೪೪ ದೇಶಗಳಿಂದ ಅರ್ಜಿಗಳು ಸಲ್ಲಿಕೆಯಾಗಿದ್ದು, ಅದರಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದ ಕೆಎಂಎಫ್‌ನ ಸಾಧನೆಗಳನ್ನು ಗುರುತಿಸಿ ಚೀನಾ ಮತ್ತು ನಾರ್ವೇ ದೇಶಗಳನ್ನು ಹಿಂದಿಕ್ಕಿ ಕ್ಷೀರಭಾಗ್ಯ ಯೋಜನೆಗೆ “ಇನ್ನೋವೇಷನ್ ಇನ್ ಸ್ಕೂಲ್ ಮಿಲ್ಕ್ ಪ್ರೋಗ್ರಾಮ್ಸ್” ಪ್ರತಿಷ್ಠಿತ ಪ್ರಶಸ್ತಿ ನೀಡಿದೆ.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page