ಬುಧವಾರ , ಅಕ್ಟೋಬರ್ 9 2024
kn
Breaking News

ಬಸವಣ್ಣನವರ ಮೂರ್ತಿಗೆ ಕಿಡಿಗೇಡಿಗಳಿಂದ ಹಾನಿ: ತಪ್ಪತಸ್ಥರ ವಿರುದ್ದ ಕ್ರಮಕ್ಕೆ ಕಾಂಗ್ರೆಸ್ ನಾಯಕರ ಆಗ್ರಹ

Spread the love

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವೇಶ್ವರ ಮೂರ್ತಿಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದು, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹಾಗೂ ವಿಧಾನಪರಿಷತ್‍ನ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಈಶ್ವರ ಖಂಡ್ರೆ, ಬಿಜಗುಪ್ಪಿಯಲ್ಲಿ ವಿಶ್ವಗುರು ಬಸವೇಶ್ವರರ ಪ್ರತಿಮೆ ಭಗ್ನ ಮಾಡಿರುವುದು ಅಕ್ಷಮ್ಯ. ಇಡೀ ಮನುಕುಲಕ್ಕೆ ಮಾನವತೆಯ ಸಂದೇಶ ಸಾರಿದ, ಸಮ ಸಮಾಜದ ಪರಿಕಲ್ಪನೆ ಕಟ್ಟಿಕೊಟ್ಟ 12ನೇ ಶತಮಾನದ ಕ್ರಾಂತಿಪುರುಷ ಬಸವೇಶ್ವರರು ಜಗತ್ತಿಗೆ ಆದರ್ಶರಾಗಿದ್ದಾರೆ. ಇಂಗ್ಲೆಂಡ್‍ನಲ್ಲಿಯೂ ಬಸವಣ್ಣನವರ ಪ್ರತಿಮೆ ಸ್ಥಾಪಿಸಿ ಗೌರವಿಸಲಾಗಿದೆ. ಇಂತಹ ಮಹಾಮಹಿಮರ ಪ್ರತಿಮೆ ಭಗ್ನಗೊಳಿಸಿರುವುದು ನಿಜಕ್ಕೂ ದುರ್ದೈವ.

ಕಿಡಿಗೇಡಿಗಳನ್ನು ಪತ್ತೆ ಮಾಡಿ ಸರಕಾರ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಎಲ್ಲ ಪ್ರತಿಮೆಗಳ ಬಳಿ ಸಿಸಿ ಟಿವಿ ಕ್ಯಾಮರಾ ಅಳವಡಿಸುವ ಕಾರ್ಯ ಆಗಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಪ್ರತಿಪಕ್ಷದ ನಾಯಕ ಎಸ್.ಆರ್.ಪಾಟೀಲ್ ಟ್ವೀಟ್ ಮಾಡಿ, ಸಮಾಜಘಾತುಕ ಶಕ್ತಿಗಳನ್ನ ಸದೆ ಬಡಿಯಿರಿ. ಬೆಳಗಾವಿಯ ರಾಮದುರ್ಗ ತಾಲೂಕಿನ ಬಿಜಗುಪ್ಪಿ ಗ್ರಾಮದಲ್ಲಿ ವಿಶ್ವಗುರು ಬಸವಣ್ಣನವರ ಮೂರ್ತಿಯನ್ನ ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ಶಾಂತಿ ಕದಡಲು ಸಮಾಜಘಾತಕ ದುಷ್ಟಶಕ್ತಿಗಳು ಇಂತಹ ಕೃತ್ಯವೆಸಗಿದ್ದಾರೆ. ಈ ಪ್ರಕರಣವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಗಂಭೀರವಾಗಿ ಪರಿಗಣಿಸಿ, ಈ ದುಷ್ಕೃತ್ಯ ಎಸಗಿದವರನ್ನು ತಕ್ಷಣವೇ ಬಂಧಿಸಿ ಸೂಕ್ತ ರೀತಿಯಲ್ಲಿ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸುತ್ತೇನೆ ಎಂದಿದ್ದಾರೆ.

 


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page